Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ. ಜುಲೈ. 31: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್ ಚಿತ್ರದುರ್ಗ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 10 ರಿಂದ 21 ರವರೆಗೆ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಚಿತ್ರದುರ್ಗ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲರ ಸಾಮಥ್ರ್ಯಗಳನ್ನು ಗುರುತಿಸುವಿಕೆ, ವ್ಯವಸ್ಥಾಪನಾ ಕೌಶಲ್ಯಗಳು, ಹೊಸ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಲೆಕ್ಕ ಪತ್ರಗಳ ನಿರ್ವಹಣೆ, ಮಾರಾಟದ ತಂತ್ರಗಳು, ಸರ್ಕಾರದ ಯೋಜನೆಗಳು, ಬ್ಯಾಂಕಗಳ ಪಾತ್ರ, ಉದ್ಯಮಶೀಲರ ಅನುಭವ ಹಂಚಿಕೆ, ಸಣ್ಣ ಉದ್ಯಮ ನಿರ್ವಹಣೆ, ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಅವಧಿಯಲ್ಲಿ ಒಂದು ದಿನ ಕೈಗಾರಿಕೆಗಳಿಗೆ ಭೇಟಿ ನೀಡಿ ಆ ಕೈಗಾರಿಕೆಗಳ ಮಾಲೀಕರ ಜೊತೆಗೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು.

ಆದುದರಿಂದ ಉದ್ಯಮ ಪ್ರಾರಂಭಿಸಲು ಉತ್ಸುಕರಾಗಿರುವ ಜಿಲ್ಲೆಯ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 18 ರಿಂದ 50 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಶಿಕ್ಷಣ ಹೊಂದಿರಬೇಕು. ಆಸಕ್ತಿಯುಳ್ಳ ಪುರುಷರು/ಮಹಿಳೆಯರು ಆಗಸ್ಟ್ 8ರೊಳಗೆ ಉಪ ನಿರ್ದೇಶಕರು, ಸಿಡಾಕ್, ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವಾನಂದ ವೆಂ. ಎಲಿಗಾರ, ಉಪ ನಿರ್ದೇಶಕರು, ಸಿಡಾಕ್, ಚಿತ್ರದುರ್ಗ ಮೊ ಸಂಖ್ಯೆ 9448812974, ಪಿ. ವಿಜಯ ಕುಮಾರ್, ತರಬೇತುದಾರರು, ಸಿಡಾಕ್, ಚಿತ್ರದುರ್ಗ ಮೊ ಸಂಖ್ಯೆ:7760270058 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now