ಟ್ರಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 10 ಮಂದಿ ಸಾವು, 32 ಮಂದಿಗೆ ಗಾಯ

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಂದು ಮುಂಜಾನೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 32 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಂತಾಮಣಿ ಟ್ರಾವೆಲ್ಸ್‌ನ ಖಾಸಗಿ ಬಸ್ ಯವತ್ಮಾಲ್‌ನಿಂದ ಮುಂಬೈಗೆ ಹೋಗುತ್ತಿದ್ದ ವೇಳೆ ಔರಂಗಾಬಾದ್ ರಸ್ತೆಯ ಕೈಲಾಸ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿನ ನಿಖರ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *