ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬಳ್ಳಾರಿ: ಬ್ಯಾಬರ್ ಗಲಾಟೆಯಲ್ಲಿ ಹಾರಿದ ಗುಂಡಿಗೆ ರಾಜಶೇಖರ್ ಬಲಿಯಾಗಿದ್ದಾರೆ. ಇಡೀ ಕುಟುಂಬಕ್ಕೆ ಆತನೆ ಆಸರೆಯಾಗಿದ್ದ. ಇದೀಗ ಮೃತ ಕುಟುಂಬಕ್ಕೆ ಬಿಜೆಪಿ ನಾಯಕರು ಸಹಾಯ ಮಾಡಿದ್ದಾರೆ. ಮೃತ ರಾಜಶೇಖರ ರೆಡ್ಡಿ ಕುಟುಂಬಕ್ಕೆ ಬಿಜೆಪಿ 10 ಲಕ್ಷ ಪರಿಹಾರ ನೀಡಿದೆ. ಬಳ್ಳಾರಿಯಲಿರುವ ರಾಜಶೇಖರ ರೆಡ್ಡಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್, ಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ ಶ್ರೀರಾಮುಲು ಸೇರಿದಂತೆ ಬಿಜೆಪಿ ಪ್ರಮುಖರು ರಾಜಶೇಖರ ರೆಡ್ಡಿ ಅವರ ತಾಯಿ ಅವರಿಗೆ ಹತ್ತು ಲಕ್ಷ ರೂಪಾಯಿಯ ಚೆಕ್ ಅನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದರು.
ಇತ್ತೀಚಿಗೆ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದ ಕಾಂಗ್ರೆಸ್ ನಿಯೋಗ 25 ಲಕ್ಷ ರೂ ಪರಿಹಾರವನ್ನು ಕೆಪಿಸಿಸಿ ವತಿಯಿಂದ ನೀಡಿತ್ತು. ಇದರ
ಬೆನ್ನಲ್ಲೇ, ಬಿಜೆಪಿ ಕೂಡ 10 ಲಕ್ಷ ರುಪಾಯಿ ಪರಿಹಾರ ನೀಡಿರುವುದು ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ರಾಜಶೇಖರ್ ರೆಡ್ಡಿ ತಾಯಿ, ಅವರ ಸಹೋದರ, ಮತ್ತು ಸಹೋದರಿ ಸೇರಿದಂತೆ ಕುಟುಂಬದವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಸಾಂತ್ವಾನ ಹೇಳಿದರು. ಜೊತೆಗೆ ಅವರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. ಮಗನ ಸಾವಿನ ದುಃಖದಿಂದ ಹೊರಗೆ ಬರಲಿ, ಆ ದೇವರು ನಿಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್