ಚಿತ್ರದುರ್ಗ : ಜಿಲ್ಲೆಯಲ್ಲಿ 10 ಜನರಿಗೆ ಕೋವಿಡ್ ಸೋಂಕು ದೃಢ: ತಾಲ್ಲೂಕುವಾರು ಮಾಹಿತಿ

suddionenews
1 Min Read

ಚಿತ್ರದುರ್ಗ, (ಸೆಪ್ಟೆಂಬರ್. 06) :ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 10 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,424ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 7, ಹಿರಿಯೂರು 02 ಹಾಗೂ ಹೊಸದುರ್ಗ 01 ಸೇರಿದಂತೆ ಒಟ್ಟು 10 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 20 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸೋಮವಾರ ಒಟ್ಟು 3341 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ಕೋವಿಡ್‍ನಿಂದ ಇದುವರೆಗೆ ಒಟ್ಟು 203 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,016 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 205 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 7,56,700 ಜನರ ಮಾದರಿ ಸಂಗ್ರಹಿಸಲಾಗಿದ್ದು, 7,17,951 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1459 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *