ಇಂಡಿಯನ್ ಇಂಟರ್‌ನ್ಯಾಷನಲ್‌ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ರಷ್ಟು ಫಲಿತಾಂಶ

suddionenews
1 Min Read

ಚಿತ್ರದುರ್ಗ,(ಮೇ.20) : ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಇಂಡಿಯನ್ ಇಂಟರ್‌ನ್ಯಾಷನಲ್‌ ಆಂಗ್ಲ ಮಾಧ್ಯಮ ಶಾಲೆಗೆ 2021-22 ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದೆ.

ಶ್ರೀ ರಕ್ಷಾ.ಜಿ. 606 ಅಂಕಗಳು, ಕವನ.ಡಿ.ಎಸ್., 597 ಅಂಕಗಳು ಹಾಗೂ ಸುಧಾ.ಹೆಚ್.ಯು., 589 ಅಂಕಗಳನ್ನು ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆ ಹಾಗೂ ಶಿಕ್ಷಕರ ಪರಿಶ್ರಮವನ್ನು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳು ಹಾಗೂ ಶಾಸಕರಾದ  ಎಂ.ಚಂದ್ರಪ್ಪನವರು, ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪನವರು, ಸಿ.ಇ.ಓ ಆದ ಎಂ.ಸಿ.ರಘುಚಂದನ್‍ರವರು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದಿಸಿದ್ದಾರೆ.

ಶಾಲೆಯ ಶೈಕ್ಷಣಿಕ ಸಂಯೋಜಕರಾದ .ಎ.ಬಿ.ಲಿಂಗಮೂರ್ತಿ, ಮುಖ್ಯೋಪಾಧ್ಯಾಯರಾದ ಆರ್.ಸಿ.ತಿಪ್ಪೇಸ್ವಾಮಿಯವರು ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *