ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 1,001 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 16787 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 53503 RTPCR ಟೆಸ್ಡ್ ಸೇರಿದಂತೆ ಒಟ್ಟು 70290 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 1001 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 485 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 1780 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 18 ಜನ ಸಾವನ್ನಪ್ಪಿದ್ದಾರೆ.

