ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 1033 ಜನಕ್ಕೆ ಕೊರೊನಾ ಸೋಂಕು ತಗುಲಿದೆ.
ಅದರಲ್ಲಿ 22098 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 97127 RTPCR ಟೆಸ್ಟ್ ಸೇರಿದಂತೆ ಒಟ್ಟು 119225 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 1033 ಜನಕ್ಕೆ ಸೋಂಕು ದೃಢಪಟ್ಟಿದೆ. 810 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 354 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 5 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.