ಬೆಂಗಳೂರು: 2023ರ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕಾರ ನಾಳೆ ನಡೆಯಲಿದೆ. ರಾಜಭವನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಾರಿ ಎಸ್ ಎಲ್ ಭೈರಪ್ಪ, ಎಸ್ ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. ಹಾಗೇ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಡಾ. ಖಾದರ್ ವಲ್ಲಿ ದುಡೆ ಕುಲ್ಲಾ, ತಮಟೆ ಕಲಾವಿದ ನಾಡೋಜಾ ಶ್ರೀ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಕೊಡವ ಸಾಹಿತ್ಯ ಕ್ಷೇತ್ರದ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ಬೀದರ್ ಕಲಾವಿದ ರಶೀದ್, ಪುರಾತತ್ವ ಶಾಸ್ತ್ರಜ್ಞ ಎಸ್ ಸುಬ್ಬರಾಮನ್ ಸೇರಿದಂತೆ ಕರ್ನಾಟಕದ 106 ಮಂದಿಗೆ ಪ್ರಶಸ್ತಿ ಲಭಿಸಿದೆ.
ಪದ್ಮಶ್ರೀ ಪ್ರಶಸ್ತಿಯನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದ್ದು, ನಾಳೆ ರಾಷ್ಟ್ರಪತಿ ಭವನದಲ್ಲಿ ವಿತರಿಸಲಾಗುತ್ತದೆ.





GIPHY App Key not set. Please check settings