ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 1074 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 34313 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 135135 RTPCR ಟೆಸ್ಟ್ ಸೇರಿದಂತೆ ಒಟ್ಟು 169448 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 1074 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 343 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದ 4 ಮಂದಿ ಸಾವನ್ನಪ್ಪಿದ್ದಾರೆ. 1136 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.