ಸಿದ್ಧಗಂಗಾ ಶ್ರೀಗಳ 116ನೇ ಹುಟ್ಟುಹಬ್ಬ : 116 ಮಕ್ಕಳಿಗೆ ಶ್ರೀಗಳ ಹೆಸರು ನಾಮಕರಣ

suddionenews
1 Min Read

 

ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಹುಟ್ಟುಹಬ್ಬ ಇಂದು. 116ನೇ ಹುಟ್ಟುಹಬ್ಬವನ್ನು ಮಠದಲ್ಲಿ ಆಚರಣೆ ಮಾಡಲಾಗುತ್ತದೆ. ಇಂದು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಮಾಡಲಾಗಿದೆ. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪೂಜೆ, ಪುನಸ್ಕಾರಗಳನ್ನು ಮಾಡಲಾಗಿದೆ.

ಗದ್ದುಗೆಗೆ ಪೂಜೆ ಪುನಸ್ಕಾರ ಮಾಡಿದ್ದು, ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಇಂದು ಬೆಳಗ್ಗೆಯೇ ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ಮಾಡಿದ್ದಾರೆ. ಇಂದು ಬೆಳಗ್ಗೆ ವಾಸಲ ವೇದಿಕೆಯಲ್ಲಿ ಕಾರ್ಯಕ್ರಮ ಕೂಡ ನಡೆದಿದೆ. ಸಿದ್ಧಗಂಗಾ ಮಠದ ಶ್ರೀ, ಸುತ್ತೂರು ಮಠದ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನೆರವೇರಿದೆ.

ರಾಜ್ಯಪಾಲ ಥಾವರ್ ಚಂದ್, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. 116 ಮಕ್ಕಳಿಗೆ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಗಿದೆ. ಜೊತೆಗೆ ಆ ಮಕ್ಕಳಿಗೆ ತೊಟ್ಟಿಲು, ಬಟ್ಟೆಯನ್ನು ವಿತರಣೆ ಮಾಡಲಾಗಿದೆ. ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬಕ್ಕೆ ರಾಜ್ಯದ ನಾನ ಮೂಲೆಯಿಂದ ಬಂದಿದ್ದಾರೆ. ಶ್ರೀಗಳ ಗದ್ದುಗೆಯ ದರ್ಶನ ಪಡೆದು, ಭಕ್ತಿಯಿಂದ ನಮಸ್ಕರಿಸಿ, ಪ್ರಸಾದ ಸ್ವೀಕರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks