Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿ. 20 ಮತ್ತು 21 ರಂದು ರಾಯಚೂರುನಲ್ಲಿ 11 ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ : ಕೋಡಿಹಳ್ಳಿ ಟಿ ಶಿವಮೂರ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕದ ವತಿಯಿಂದ 11ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ

‎ಡಿ : 20 ಮತ್ತು 21 ರಂದು ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ.ಅರ್ಜುನ್ ಗೊಳಸಂಗಿ ರವರು ತಿಳಿಸಿರುತ್ತಾರೆ..

‎ಈ ಸಮ್ಮೇಳನದಲ್ಲಿ ಶ್ರೀಮತಿ ಜಯದೇವಿ ಗಾಯಕವಾಡ ರವರು ಇಡೀ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ ಹಾಗೂ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ರವರು ಉದ್ಘಾಟಿಸಲಿದ್ದಾರೆ ಎಂದು ದಲಿತ ಸಾಹಿತ್ಯ ಪರಿಷತ್ ಬೆಂಗಳೂರು ವಿಭಾಗೀಯ ಸಂಯೋಜಕರು ಆದ ಶ್ರೀ ಗಣಪತಿ ಗೋ ಛಲವಾದಿ ರವರು ತಿಳಿಸಿದ್ದಾರೆ.

ಈ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯದ ಕುರಿತು ವಿಚಾರ ಗೋಷ್ಠಿ, ಮಹಿಳಾ ಕಾವ್ಯಯಾನ, ಪುರುಷ ಕಾವ್ಯಯಾನ, ಜನಪದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಅಲ್ಲದೆ ರಾಷ್ಟ್ರೀಯ ಗೌರವ ಪ್ರಶಸ್ತಿ, ರಾಷ್ಟ್ರೀಯ ಯುವ ಪ್ರಶಸ್ತಿ, ರಾಷ್ಟ್ರೀಯ ಪುಸ್ತಕ ಪ್ರಶಸ್ತಿ, ಬಾಲ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ..

ಡಿ: 21 ರಂದು ಸಂಜೆ 04 ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ, ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಸಮಾರೋಪ ಭಾಷಣ ಮಾಡಲಿದ್ದಾರೆ,ಹಾಗೂ ಬೀದರ್ ಬೌದ್ಧ ವಿಹಾರದ ವರಜ್ಯೋತಿ ಬಂತೇಜಿ ಇದರ ನೇತೃತ್ವ ವಹಿಸುವರು .
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಕವಿಗಳು, ಸಾಹಿತ್ಯಾಸಕ್ತರು, ಲೇಖಕರು, ಯುವ ಬರಹಗಾರರು, ಕವಯಿತ್ರಿಯರು, ದಲಿತ ಸಂಘಟನೆಗಳ ನಾಯಕರು, ಹೋರಾಟಗಾರರು, ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಕಾರ್ಯಕ್ರಮಕ್ಕೆ ನಮ್ಮ ಚಿತ್ರದುರ್ಗ ಜಿಲ್ಲೆಯ ವತಿಯಿಂದ ಆಸಕ್ತ ಸಾಹಿತಿಗಳು,ಕವಿಗಳು, ಯುವ ಬರಹಗಾರು,
ಸಾಹಿತ್ಯಾಸಕ್ತರು, ಲೇಖಕರು ಭಾಗವಹಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಎಂ ಗುರುನಾಥ್ ಹಾಗೂ ಚಿತ್ರದುರ್ಗ ಜಿಲ್ಲೆಯ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಕೋಡಿಹಳ್ಳಿ ಟಿ. ಶಿವಮೂರ್ತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...