ನವದೆಹಲಿ: ಬಹುಮಹಡಿ ಕಟ್ಟಡವೊಂದರ ಪಾರ್ಕಿಂಗ್ ಸ್ಥಳದಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡು, ಅಲ್ಲಿ ನಿಲಗಲಿಸಿದ್ದ ಸುಮಾರು 20 ಕಾರುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿ ನಡೆದಿದೆ. ಆದರೆ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.
![](https://suddione.com/content/uploads/2024/10/gifmaker_me-5-1.gif)
ಮುಂಜಾನೆ ನಾಲ್ಕು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜಾಸ್ತಿಯಾಗುತ್ತಿದ್ದಂತೆ ಅಲ್ಲಿಯೇ ಇದ್ದವರ ಗಮನಕ್ಕೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದು, ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಳಗ್ಗಿನ ಜಾವ ಹೊತ್ತಿಕೊಂಡ ಬೆಂಕಿಯನ್ನು ಒಂಭತ್ತು ಗಂಟೆಯ ತನಕ ಆರಿಸಿದ್ದಾರೆ. ಅಷ್ಟು ದಟ್ಟವಾಗಿ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ.
ಇನ್ನು ಘಟನೆ ನಡೆದ ಸ್ಥಳದ ದೃಶ್ಯಾವಳಿಯನ್ನು ಪೊಲೀಸರು, ಸಿಸಿಟಿವಿಯಲ್ಲಿ ಪರಿಶೀಲನೆ ಮಾಡಲಾಗಿದೆ. ಅದರಲ್ಲಿ ಯಾರೋ ಒಬ್ಬ ವ್ಯಕ್ತಿ ಅನುಮಾನಸ್ಪದವಾಗಿ ಓಡಾಡಿರುವುದು ಕಂಡು ಬಂದಿದೆ. ಸದ್ಯ ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
![](https://suddione.com/content/uploads/2025/02/site.webp)