Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ಸೇತುವೆ ಕುಸಿತದಲ್ಲಿ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು..!

Facebook
Twitter
Telegram
WhatsApp

ಗಾಂಧಿನಗರ: ಜಿಲ್ಲೆಯ ಮೊರ್ಬಿ ನದಿ ಸೇತುವೆ ಕುಸಿತದಿಂದಾಗಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ ದುರಂತದಲ್ಲಿ ಬಿಜೆಪಿ ಸಂಸದರೊಬ್ಬರ ಕುಟುಂಬದ 12 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರಾಜ್ ಕೋಟ್ ನ ಬಿಜೆಪಿ ಸಂಸದ ಮೋಹನ್ ಭಾಯ್ ಕಲ್ಯಾಣ್ ಜಿ ಕುಂದರಿಯಾ ಅವರ ಕುಟುಂಬದ 12 ಜನ ಪ್ರಾಣ ಕಳೆದುಕೊಂಡಿದ್ದಾರೆ.

https://youtu.be/bMnHiF0c7C8

ಈ ಬಗ್ಗೆ ಮಾತನಾಡಿರುವ ಸಂಸದ ಕುಂದರಿಯಾ, ಈ ದುರ್ಘಟನೆಯಲ್ಲಿ ನನ್ನ ಕುಟುಂಬದ 12 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಐದು ಮಕ್ಕಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ನನ್ನ ಸಹೋದರಿಯ ಕುಟುಂಬಸ್ಥರನ್ನು ಕಳೆದುಕೊಂಡಿದ್ದೇನೆ ಎಂದು ದುಃಖಿತರಾಗಿದ್ದಾರೆ.

ಭಾನುವಾರ ಸಂಜೆ 6.30ಕ್ಕೆ ಈ ದುರ್ಘಟನೆ ನಡೆದಿದೆ. ಭಾನುವಾರವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಕ್ಕಳು ವೃದ್ಧರು ಸೇರಿದಂತೆ ಸುಮಾರು 500 ಜನ ಸೇತುವೆ ಮೇಲೆ ಇದ್ದರು. ಏಕಾಏಕಿ ಸೇತುವೆ ಕುಸಿತದಿಂದಾಗಿ ಹಲವಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಎನ್ಡಿಆರ್ಎಫ್ ತಂಡ, ಸೇನಾ ಪಡೆ ಸೇರಿದಂತೆ ಹಲವು ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!