Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಅವರ ಸಚಿವ ಸಂಪುಟದ ಮೊದಲ ಹಂತದ ವಿಸ್ತರಣೆಯಲ್ಲಿ 13 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರದ ವೇಳೆ ಸಚಿವರುಗಳು ತಮ್ಮದೇ ಆದ ಶೈಲಿಯಲ್ಲಿ ಮತ್ತು ವಿವಿಧ ಆರಾಧ್ಯ ದೈವ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ನೆರವೇರಿಸಿದ್ದು ವಿಶೇಷವಾಗಿತ್ತು. ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಭಾರತೀಯ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞೆ ಮಾಡಿದರು.

ಎಂ.ಬಿ. ಪಾಟೀಲ್ ಅವರು ವಿಶ್ವಗುರು ಬಸವಣ್ಣ, ಬಸವಾದಿ ಶರಣರು ಹಾಗೂ ಲಿಂಗೈಕ್ಯ ಸಿದ್ದೇಶ್ವರ ಮಹಾಸ್ವಾಮೀಜಿಯವರನ್ನು ಸ್ಮರಿಸಿ ಅಧಿಕಾರ ಸ್ವೀಕರಿಸಿದರು. ಈಶ್ವರ್ ಖಂಡ್ರೆ ಅವರು ದೇವರು ಹಾಗೂ ತಮ್ಮ ಗುರುಗಳಾದ ಲಿಂಗೈಕ್ಯ ಚನ್ನಬಸಪ್ಪ ಪಟ್ಟದೇವರ ಹೆಸರಿನಲ್ಲಿ ಪ್ರಮಾಣವಚನ ಪಡೆದರು.

ಕಾಂಗ್ರೆಸ್‌ ನ ಹಿರಿಯ ಶಾಸಕ ವಿ. ಮುನಿಯಪ್ಪ, ಕೆ.ಜೆ. ಜಾರ್ಜ್, ಭೈರತಿ ಸುರೇಶ್ ಮತ್ತು ಡಾ. ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಇವರೊಂದಿಗೆ ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಯು.ಟಿ. ಖಾದರ್ ಅವರು ಕೂಡ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು.

ನೂತನ ಸಚಿವರ ಸಂಪೂರ್ಣ ಪಟ್ಟಿ:

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಹಂತದಲ್ಲಿ ಸಚಿವರಾದವರ ಪಟ್ಟಿ ಇಲ್ಲಿದೆ:

ಡಾ. ಜಿ. ಪರಮೇಶ್ವರ್

ವಿ. ಮುನಿಯಪ್ಪ

ಕೆ.ಜೆ. ಜಾರ್ಜ್

ಎಂ.ಬಿ. ಪಾಟೀಲ್

ರಾಮಲಿಂಗಾರೆಡ್ಡಿ

ಸತೀಶ್ ಜಾರಕಿಹೊಳಿ

ಕೃಷ್ಣ ಬೈರೇಗೌಡ

ಪ್ರಿಯಾಂಕ್ ಖರ್ಗೆ

ಯು.ಟಿ. ಖಾದರ್

ಈಶ್ವರ್ ಖಂಡ್ರೆ

ಡಾ. ಯತೀಂದ್ರ

ಭೈರತಿ ಸುರೇಶ್

ಡಾ. ಶರಣ ಪ್ರಕಾಶ್ ಪಾಟೀಲ್

ಹಿರಿಯರ ಅನುಭವ ಮತ್ತು ಯುವಕರ ಉತ್ಸಾಹದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಈ ನೂತನ ಸಚಿವ ಸಂಪುಟವು ರಾಜ್ಯದ ಅಭಿವೃದ್ಧಿಗೆ ಯಾವ ರೀತಿಯ ಹೊಸ ದಿಕ್ಸೂಚಿ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Join WhatsApp

Join Now

Join Telegram

Join Now