Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶದ 135 ಕೋಟಿ ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ : ಸಭಾಪತಿ ಜಗದೀಪ್ ದಂಖಡ್

Facebook
Twitter
Telegram
WhatsApp

 

ನವದೆಹಲಿ : ಕೇಂದ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ಆಡಳಿತಾರೂಢ ಬಿಜೆಪಿ ಸದಸ್ಯರು ಖರ್ಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಆದರೆ, ಕಾಂಗ್ರೆಸ್ ಅಧ್ಯಕ್ಷರು ಇದಕ್ಕೆ ನಿರಾಕರಿಸಿದ್ದರಿಂದ ಸದನದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಈ ಬೆಳವಣಿಗೆಗಳ ಬಗ್ಗೆ ಸಭಾಪತಿ ಜಗದೀಪ್ ಧನಖಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ಯನ್ನು ‘ಭಾರತ್ ತೋಡೋ ಯಾತ್ರೆ’ ಎಂದು ಕರೆದಿರುವ ಬಿಜೆಪಿ ನಾಯಕರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜಸ್ಥಾನದ ಅಲ್ವಾರ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರಂತಹ ನಾಯಕರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಬಿಜೆಪಿಯವರ ಮನೆಯಲ್ಲಿ ದೇಶಕ್ಕಾಗಿ ಒಂದು ನಾಯಿಯಾದರೂ ಸತ್ತಿದೆಯಾ ? ಎಂದು‌ ಪ್ರಶ್ನಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಮಂಗಳವಾರ ಸಂಸತ್ ಕಲಾಪ ಆರಂಭವಾದಾಗ ಖರ್ಗೆ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ಆಡಳಿತ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಖರ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಲೋಕಸಭೆಯಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ನಡೆಯಿತು.

ನಾವು ಮಕ್ಕಳೇ ?
ರಾಜ್ಯಸಭೆಯಲ್ಲಿ ಖರ್ಗೆ ಅವರ ಹೇಳಿಕೆಗೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಪತಿ ಜಗದೀಪ್ ಧನಖಡ್ ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ತಿನ ಹೊರಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗುತ್ತಿದೆ. ದೇಶದ 135 ಕೋಟಿ ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ. ಸದನದಲ್ಲಿ ಇಂತಹ ನಡವಳಿಕೆ ನಮಗೆ ಕೆಟ್ಟ ಹೆಸರು ತರುತ್ತದೆ. ಸದನದಲ್ಲಿ ಕಲಾಪ ನಡೆಯುವ ರೀತಿಯ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಕನಿಷ್ಠ ಸಭಾಪತಿಯವರ ಸೂಚನೆಯನ್ನೂ ಪಾಲನೆ ಮಾಡುತ್ತಿಲ್ಲ. ಎಂತಹ ಶೋಚನೀಯ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದ್ದಾರೆ. ನಾವೇನಾದರೂ ಮಕ್ಕಳಾ?’ ಎಂದು ರಾಜ್ಯಸಭಾ ಸಭಾಪತಿ ಜಗದೀಪ್ ದಂಖಡ್ ಅಸಹನೆ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸುವಂತೆ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜೈಕುಮಾರ್ ಪದಾಧಿಕಾರಿಗಳಿಗೆ ಕರೆ ನೀಡಿದರು.

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!