ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ, ಪೋಷಕರಲ್ಲಿ ಮೊಬೈಲ್ ಗೀಳು ಎಷ್ಟಿದೆ ಅಂದ್ರೆ ಮೊಬೈಲ್ ಇಲ್ಲದೆ ಇದ್ರೆ ಪ್ರಪಂಚವೇ ಇರಲ್ಲ. ಸಮಯವೂ ಮುಂದಕ್ಕೆ ಹೋಗಲ್ಲ. ಅದರಲ್ಲೂ ಮಕ್ಕಳಿಗೆ ಊಟ ಮಾಡುವುದಕ್ಕೂ ಮೊಬೈಲ್ ಬೇಕು, ಆಟ ಆಡೋದಕ್ಕೂ ಮೊಬೈಲ್ ಬೇಕು. ಅಂಥ ಪರಿಸ್ಥಿತಿಗೆ ಬಂದು ನಿಂತಿದೆ ಈ ಮೊಬೈಲ್ ಗೀಳು. ಇದೇ ಗೀಳಿನಿಂದ ಇಂದು ಬಾಲಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಹುಬ್ಬಳ್ಳಿಯ ಉದಯನಗರದಲ್ಲಿ ಮೊಬೈಲ್ ಗೀಳಿಗೆ ಸಿಲುಕಿದ್ದ 14 ವರ್ಷದ ಬಾಲಕ, ತನ್ನ ತಾಯಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಇಂಥ ಅನಾಹುತ ಮಾಡಿಕೊಂಡಿದ್ದಾನೆ. ಮೃತ ಸಮರ್ಥ್ ಕಳೆದ ಕೆಲವು ದಿನಗಳಿಂದ ಫ್ರೀ ಫೈಯರ್ ಅಂತಹ ಗೇಮ್ ಗಳಿಗೆ ಅಡಿಕ್ಟ್ ಆಗಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನ್ನಾಡಿದ್ದಾರೆ.
ಇದು ಅತ್ಯಂತ ದುರದೃಷ್ಟಕರ ಘಟನೆ. ಮಕ್ಕಳಿಗೆ ಮೊಬೈಲ್ ನೀಡುವ ಮುನ್ನ ಪೋಷಕರು ಹೆಚ್ಚಿನ ಜಾಗರೂಕತೆಯನ್ನ ವಹಿಸಬೇಕು. ಮಕ್ಕಳು ಮೊಬೈಲ್ ಅಡಿಕ್ಷನ್ ಗೆ ಒಳಗಾದಾಗ ಪೋಷಕರನ್ನೇ ಬ್ಲಾಕ್ ಮೇಲ್ ಮಾಡುವ ಹಂತಕ್ಕೆ ತಲುಪುತ್ತಾರೆ. ಒಂದು ವೇಳೆ ಮಕ್ಕಳು ಮೊಬೈಲ್ ಗೆ ಹೆಚ್ಚು ಅಡಿಕ್ಟ್ ಆಗಿದ್ದರೆ, ಏಕಾಏಕಿ ಮೊಬೈಲ್ ನಿಂದ ದೂರವಿಡಲು ಪ್ರಯತ್ನಿಸಬಾರದು. ಬದಲಾಗಿ, ಅವರ ಶಿಕ್ಷಕರು ಅಥವಾ ಮಕ್ಕಳ ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ, ನಿಧಾನವಾಗಿ ಈ ವ್ಯಸನದಿಂದ ಹೊರಗೆ ಬರುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
ಮೃತ ಸಮರ್ಥ್ ತಾಯಿ, ಯಾವಾಗಲೂ ಮೊಬೈಲ್ ನೋಡಿಕೊಳ್ಳುತ್ತಾ ಕೂರಬೇಡ. ಓದಿನ ಕಡರಗೆ ಗಮನ ಕೊಡು ಎಂದು ಮೊಬೈಲ್ ಕಿತ್ತುಕೊಂಡಿದ್ದೇ ಈ ಅವಘಡಕ್ಕೆ ಕಾರಣವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















