ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 1,405 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 26,874 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 46,412 RTPCR ಟೆಸ್ಡ್ ಸೇರಿದಂತೆ ಒಟ್ಟು 73,286 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 1,405 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 765 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 5762 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 26 ಜನ ಸಾವನ್ನಪ್ಪಿದ್ದಾರೆ.

