Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ 15 ದಿನ ಅಭಿಯಾನ: ಸಚಿವ ಡಾ.ಕೆ.ಸುಧಾಕರ್‌

Facebook
Twitter
Telegram
WhatsApp

 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ, ಸೆಪ್ಟೆಂಬರ್‌ 17 ರಿಂದ ಮಹಾತ್ಮ ಗಾಂಧಿ ಜಯಂತಿವರೆಗೆ (ಅಕ್ಟೋಬರ್‌ 2) ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದ ರೂಪರೇಷೆ ಸಿದ್ಧಪಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ವಿವಿಧ ಆಸ್ಪತ್ರೆಗಳ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳೊಂದಿಗೆ ವೀಡಿಯೋ ಸಭೆ ನಡೆಸಿದರು.

ಈ ಅಭಿಯಾನಕ್ಕೆ ಸೆಪ್ಟೆಂಬರ್‌ 17 ರಂದು ಬಿಎಂಸಿಆರ್‌ಐನಲ್ಲಿ (ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ) ಚಾಲನೆ ದೊರೆಯಲಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಇಲ್ಲ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ರಾಜ್ಯದಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದಾಗಿ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಮಧುಮೇಹ, ಬಿಪಿ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಮಾಡಬೇಕಿದೆ.

ಆರೋಗ್ಯ ಉಪಕೇಂದ್ರಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ನಿರಂತರವಾಗಿ ಈ ಕಾರ್ಯ ನಡೆಯಬೇಕಿದೆ. ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ತಿಳಿಸಿ, ಗುರಿ ನಿಗದಿ ಮಾಡಿ ಜನರನ್ನು ಉಪಕೇಂದ್ರಕ್ಕೆ ಕರೆದುಕೊಂಡು ಬರಲು ಸೂಚಿಸಬೇಕು. ರಾಜ್ಯದಲ್ಲಿ ಕೋವಿಡ್‌ ಮೂರನೇ ಡೋಸ್‌ ಪ್ರಮಾಣ ಶೇ.20 ರಷ್ಟು ಮಾತ್ರ ಆಗಿದೆ. ಈ ಹದಿನೈದು ದಿನಗಳಲ್ಲಿ ಲಸಿಕಾಕರಣವು ದೊಡ್ಡ ಮಟ್ಟದಲ್ಲಿ ನಡೆಯಲು ಕ್ರಮ ವಹಿಸಬೇಕು. ಎನ್‌ಜಿಒಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳನ್ನು ಆಹ್ವಾನಿಸಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಕರೆ ನೀಡಬೇಕು ಎಂದು ಸೂಚಿಸಿದರು.

 

ನವಜಾತ ಶಿಶುವಿನಿಂದ ಆರಂಭವಾಗಿ, ವಯೋವೃದ್ಧರವೆಗೂ ಸರ್ಕಾರ ನೀಡಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಚಿಕಿತ್ಸೆ, ತಪಾಸಣೆಯ ಸೌಲಭ್ಯಗಳ ಬಗ್ಗೆ ಅನೇಕರಿಗೆ ಗೊತ್ತೇ ಇಲ್ಲ. ಅಂತಹವರಿಗೆ ಜಾಗೃತಿ ಮೂಡಿಸಿ ತಪಾಸಣೆ ಮಾಡಿಸಿಕೊಳ್ಳಲು ಹೇಳಬೇಕು. ರಾಜ್ಯದಲ್ಲಿ ಕ್ಯಾನ್ಸರ್‌ ತಪಾಸಣೆಯನ್ನು ಕೂಡ ಮಾಡಬೇಕು. ಜಿಲ್ಲಾ ಮಟ್ಟ ಅಥವಾ ತಾಲೂಕು ಮಟ್ಟದಲ್ಲಿ ತಪಾಸಣೆ ವ್ಯವಸ್ಥೆ ಮಾಡಿ, ಜನರೇ ಮುಂದೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು.

ಹಾಗೆಯೇ, 35 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ ಪುರುಷರನ್ನು ಕರೆದುಕೊಂಡು ಬಂದು ತಪಾಸಣೆ ಮಾಡಿಸಬೇಕು. ಐದು ವರ್ಷಕ್ಕೊಮ್ಮೆ ಇಂತಹ ಕಾರ್ಯಕ್ರಮ ನಡೆಯಬೇಕು. ಹೀಗೆ ತಪಾಸಣೆ ಮಾಡಿದರೆ ಸಾವುಗಳನ್ನು ತಪ್ಪಿಸಬಹುದು. ಜೊತೆಗೆ 8, 9, 10 ನೇ ವರ್ಷ ವಯಸ್ಸಿನ ಮಕ್ಕಳಿಗೆ ಕಣ್ಣಿನ ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

 

ಸ್ಥಳೀಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೇಳಿ ಜನರನ್ನು ಕರೆಸಿ ಅವರ ಆರೋಗ್ಯ ತಪಾಸಣೆ ಮಾಡಿಸಬಹುದು. ಹಾಗೆಯೇ ಎನ್‌ಜಿಒಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಜನರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!