ತುಮಕೂರು: ಮತಗಳ್ಳತನದ ಬಗ್ಗೆ ಮಾತನಾಡಿದ್ದ ಕಾರಣಕ್ಕೆ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದಲೇ ಉಚ್ಛಾಟನೆ ಮಾಡಲಾಗಿದೆ. ಅಂದಿನಿಂದಲೂ ಅವರ ಅಭಿಮಾನಿಗಳು, ಬೆಂಬಲಿಗರು ಪ್ರತಿಭಟನೆಯನ್ನು ಮಾಡಿದ್ದಾರೆ. ಆದರೆ ಯಾವುದು ವರ್ಕೌಟ್ ಆಗಿಲ್ಲ. ಈಗ ಹದಿನೈದು ಸ್ವಾಮೀಜಿಗಳು ಕೆ.ಎನ್.ರಾಜಣ್ಣ ಅವರ ಬೆಂಬಲಕ್ಕೆ ನಿಂತಿದ್ದಾರೆ.
ವಿವಿಧ ಮಠಗಳ ಸ್ವಾಮಿಗಳು ರಾಜಣ್ಣ ಪರವಾಗಿ ನಿಂತಿದ್ದು, ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಕ್ಯಾತ್ಸಂದ್ರದಲ್ಲಿರುವ ರಾಜಣ್ಣರ ನಿವಾಸದಲ್ಲಿ ಚಿತ್ರದುರ್ಗದ ಶ್ರೀ ಜಗದ್ಗುರು ಅಖಿಲ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಹೊಸದುರ್ಗದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮಿಗಳು, ದಾವಣಗೆರೆಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಸ್ವಾಮೀಜಿಗಳು ರಾಜಣ್ಣನವರನ್ನು ಭೇಟಿಯಾದರು. ಸತತ ಒಂದು ಘಂಟೆಗೂ ಅಧಿಕ ಕಾಲ ರಾಜಣ್ಣನ ಜೊತೆ ಚರ್ಚೆ ನಡೆಸಿದ 15ಕ್ಕೂ ಹೆಚ್ಚು ಸ್ವಾಮಿಜಿಗಳು ಸಚಿವ ಸ್ಥಾನದಿಂದ ತೆರವು ವಿಚಾರಕ್ಕೆ ಬೇಸರ ವ್ಯಕ್ತಪಡಿಸುವುದರ ಜೊತೆಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಮಾತುಗಳನ್ನಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣನ ಸಚಿವ ಸ್ಥಾನದಿಂದ ಕೈ ಬಿಟ್ಟಿರೊದು ಆಘಾತಕಾರಿ ವಿಚಾರ. ಇದು ರಾಜಣ್ಣನವರಿಗೆ ಆದ ನಷ್ಟವಲ್ಲ ಬದಲಾಗಿ ರಾಜ್ಯದ ಜನತೆಗೆ ಆದ ನಷ್ಟ. ಒಬ್ಬ ಹಿಂದುಳಿದ ನಾಯಕನಿಗೆ ಸಮಯ ಕೊಡಬೇಕಿತ್ತು. ಹೈಕಂಮಾಂಡ್ ಈ ವಿಚಾರ ಗಂಭೀರವಾಗಿ ಪರಿಗಣಿಸಿ ಮತ್ತೆ ರಾಜಣ್ಣನಿಗೆ ಸಚಿವ ಸ್ಥಾನ ಕೊಡಬೇಕು. ರಾಜಣ್ಣನಿಗೆ ಪುನಃ ಸಚಿವ ಸ್ಥಾನ ನೀಡಬೇಕೆಂದು ದಲಿತ ಹಿಂದುಳಿದ ವರ್ಗಗಳ ಒಕ್ಕೂಟದ ಸ್ವಾಮೀಜಿಗಳು ಹೈಕಮಾಂಡ್ ಭೇಟಿಗೆ ನಿರ್ಧಾರ ಮಾಡಿದ್ದೇವೆ. ಒಂದು ರಾಷ್ಟ್ರೀಯ ಪಕ್ಷ ಒಬ್ಬರಿಗೆ ಒಂದು ನ್ಯಾಯ ಮತ್ತೊಬ್ಬರಿಗೆ ಒಂದು ನ್ಯಾಯ ಮಾಡಬಾರದು. ದಲಿತ ಮತ ಚದುರದಂತೆ ನೋಡಿಕೊಳ್ಳಬೇಕು. ಹಾಗಾಗಿ ರಾಜಣ್ಣರಿಗೆ ಮತ್ತೆ ಸಚಿವ ಸ್ಥಾನಮಾನ ಕೊಡಬೇಕೆಂದು ಒತ್ತಾಯ ಮಾಡುತ್ತೇವೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










