ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ.
ಸುಮಾರು 100 ಜನರಿದ್ದ ಬಸ್ ಉತ್ತರ ಪ್ರದೇಶದ ಗೋರಖ್ಪುರಕ್ಕೆ ತೆರಳುತ್ತಿದ್ದಾಗ ನಿನ್ನೆ(ಶುಕ್ರವಾರ) ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್ಗೆ ಬಸ್ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ಸುಹಗಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಮಾತನಾಡಿ, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಜನರು ಉತ್ತರ ಪ್ರದೇಶದ ಕಾರ್ಮಿಕರು, ಅವರು ಮಧ್ಯಪ್ರದೇಶದ ಕಟ್ನಿಯಿಂದ ಬಸ್ ಹತ್ತಿ
ದೀಪಾವಳಿ ಹಬ್ಬಕ್ಕೆ ಮನೆಗೆ ಹೋಗುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.