ಚಿಕ್ಕಮಗಳೂರು : ಬಿಜೆಪಿ ಬೆಂಬಲಿಗ ಜಗದೀಶ ಗೌಡ ಎಂಬುವವರು ತಮ್ಮ ಕಾಫಿ ತೋಟದಲ್ಲಿ 16 ದಲಿತ ಜನರನ್ನು ದಿನಗಟ್ಟಲೆ ಕೊಠಡಿಯಲ್ಲಿ ಕೂಡಿಹಾಕಿ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಮಗೆ ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ಸಂತ್ರಸ್ತರು ಹೇಳಿಕೊಂಡಿದ್ದಾರೆ. ಅವರಲ್ಲಿ ಓರ್ವ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ಮಾಡಿದ ಕಾರಣ ಆಕೆ ಮಗುವನ್ನು ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಂತ್ರಸ್ತರು ಜೇನುಗದ್ದೆ ಗ್ರಾಮದ ಕಾಫಿ ತೋಟದಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು. ಮಾಲೀಕರಿಂದ ₹ 9 ಲಕ್ಷ ಸಾಲ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಲವನ್ನು ಮರು ಪಾವತಿಸಲು ವಿಫಲವಾದಾಗ, ಅವರನ್ನು ಕೊಠಡಿಯಲ್ಲಿ ಕೂಡಿ ಹಾಕಲಾಗಿದೆ.
ಜಗದೀಶ್ ಗೌಡ ತಮ್ಮ ಸಂಬಂಧಿಕರಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 8 ರಂದು ಕೆಲವರು ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ
ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಜಗದೀಶ ಗೌಡ ಮತ್ತು ಪುತ್ರ ತಿಲಕ್ ಗೌಡ ಎಂಬುವರ ವಿರುದ್ಧ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರೂ ಪರಾರಿಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಕುಟುಂಬಗಳ ದೂರಿನ ಪ್ರಕಾರ, “ಹಣವನ್ನು ಪಡೆದ ಕೆಲವರು ಮನೆ ತೊರೆದಿದ್ದಾರೆ, ಆದ್ದರಿಂದ ಮಾಲೀಕರು ಉಳಿದವರನ್ನು ಕೂಡಿ ಹಾಕಿದ್ದಾರೆ” ಎಂದು ಅವರು ಹೇಳಿದರು.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಕನಿಷ್ಠ 8-10 ಜನರನ್ನು ಕೋಣೆಯಲ್ಲಿ ಕೂಡಿ ಹಾಕಿರುವುದಾಗಿ ಖಚಿತಪಡಿಸಿದ್ದಾರೆ. ಕಳೆದ 15 ದಿನಗಳಿಂದ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ನಾಲ್ಕು ಕುಟುಂಬಗಳ 16 ಸದಸ್ಯರು ಮತ್ತು ಎಲ್ಲರೂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ದೂರುದಾರರ ಪ್ರಕಾರ, ಎಲ್ಲಾ 16 ಮಂದಿಯನ್ನು ಗೃಹಬಂಧನದಲ್ಲಿ ಇರಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.
ಐಪಿಸಿ ಕಲಂ 504, 323, 342 ಸೇರಿದಂತೆ ವಿವಿಧ ಕಲಂಗಳು ಹಾಗೂ ಎಸ್‌ಸಿ ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.