ಚಳ್ಳಕೆರೆ : ಜನವರಿಗೆ 18 ವರ್ಷ ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು ಎಂದು ಸಿಇಓ ಡಾ. ಕೆ. ನಂದಿನಿದೇವಿ ಹೇಳಿದರು.
ನಗರದ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ಮತದಾರರ ನೋಂದಣಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತದಾರರು ಕಡ್ಡಾಯವಾಗಿ ಮತದಾನದಿಂದ ಮತದಾನ ಮಾಡಿದಾಗಲೇ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ. ಯಾರು ಕೂಡ ಮತದಾನದಿಂದ ವಂಚಿತರಾಗದೇ ಮತದಾನ ಮಾಡಬೇಕು. ನಿಮ್ಮಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇದ್ದರೆ ಈಗಲೇ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಿ ಎಂದರು.
ಚುನಾವಣೆಯ ಶಾಖೆಯ ಅಧಿಕಾರಿಗಳು ಹಳ್ಳಿಗಳಲ್ಲಿ ಹಾಗೂ ಕಾಲೇಜುಗಳ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ ಪ್ರಜಾ ಪ್ರಭುತ್ವ ಉಳಿಬೇಕಂದರೆ ಮತದಾನ ಹೆಚ್ಚನದಾಗಿ ಆಗಬೇಕು ಎಂದು ಹೇಳಿದರು.
18 ವರ್ಷ ಮೇಲ್ಪಟ್ಟವರೆಲ್ಲರೂ ಮತದಾರರ ಪಟ್ಟಿಯಲ್ಲಿ ಸೇರಬೇಕು ಮತದಾನ ಮಾಡಬೇಕು… ಯಾವುದೇ ಮತದಾರರು ಮತದಾನ ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂದು ಹೇಳಿದರು.
ಪ್ರತಿ ಮತಗಟ್ಟೆಯಲ್ಲಿ ಮತದಾನ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇಒ ಮಡಗಿನ ಬಸಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಪೌರಾಯುಕ್ತ ಪಾಲಯ್ಯ, ಪ್ರಾಂಶುಪಾಲರಾದ ಶಿವಲಿಂಗಪ್ಪ, ಬಾಲರೆಡ್ಡಿ, ಕಂದಾಯ ಅಧಿಕಾರಿ ಲಿಂಗೇಗೌಡ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.