ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 188 ಹೊಸದಾಗಿ ಸೋಂಕಿತರು ಪತ್ತೆಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 9506 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 64418 RTPCR ಟೆಸ್ಟ್ ಸೇರಿದಂತೆ ಒಟ್ಟು 73924 ಜನರಿಗೆ ಟೆಸ್ಟ್ ಗಳನ್ನ ಮಾಡಲಾಗಿದೆ. ಅದರಲ್ಲಿ 188 ಜನರಿಗೆ ಕೊರೊನಾ ದೃಢವಾಗಿದೆ. 95 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ 318 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇಬ್ಬರು ಕೊರೊನಾದಿಂದ ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.