ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ(ಜುಲೈ21) : ತೋಟಗಾರಿಕೆ ಇಲಾಖೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸವಲತ್ತು ಪಡೆದು ಯಶ್ವಸಿಯಾಗಿರುವ ರೈತ ಮಹಿಳೆಯ ಯಶೋಗಾಥೆ ಇದು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಮಳೆ ಬೀಳುವ ತಾಲ್ಲೂಕಾಗಿದ್ದರೂ ಇಲ್ಲಿನ ರೈತರ ಪ್ರಯೋಗಶೀಲತೆಯಲ್ಲಿ ಕೊರತೆ ಕಾಣದು. ಚಳ್ಳಕೆರೆ ತಾಲ್ಲೂಕಿನ ತಿಮ್ಮಪ್ಪಯ್ಯನಹಳ್ಳಿ ಪಂಚಾಯಿತಿಯ ರಾಮಸಾಗರ ಗ್ರಾಮದ ತಿಪ್ಪೀರಮ್ಮ ಕೋಂ ಲೇ.ಪಾಲಯ್ಯ ಅವರು ಸೀಬೆ ಬೆಳೆದು ಉತ್ತಮ ಆದಾಯಗಳಿಸುತ್ತಿರುವ ರೈತ ಮಹಿಳೆ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ತಮ್ಮ 7 ಎಕರೆ ಜಮೀನಿನಲ್ಲಿ ಈ ಹಿಂದೆ ಲಭ್ಯವಿದ್ದ ಅತ್ಯಲ್ಪ ನೀರಿನಲ್ಲಿ ಈರುಳ್ಳಿ, ಟೊಮೋಟೊ, ರಾಗಿ ಈ ರೀತಿಯ ಬೆಳೆಗಳನ್ನು ಬೆಳೆಯುತ್ತಿದ್ದ ಇವರು, ನೀರಿನ ಬವಣೆಯನ್ನು ನೀಗಿಸುವ ಸಲುವಾಗಿ ಕಡಿಮೆ ನೀರನ್ನು ಬಯಸುವ ಖುಷ್ಕಿ ತೋಟಗಾರಿಕೆ ಬೆಳೆಯಾದ ಸೀಬೆಯನ್ನು ಬೆಳೆಯಲು ನಿರ್ಧರಿಸಿ, ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸೌಲಭ್ಯ ಪಡೆದು 2 ಎಕರೆ 20 ಗುಂಟೆಯಲ್ಲಿ ತೈವಾನ್ ಪಿಂಕ್ ತಳಿಯ ಸೀಬೆಯನ್ನು ಬೆಳೆದಿದ್ದಾರೆ.
ಸಸಿಗಳನ್ನು ಬಿಜಾಪುರ ಜಿಲ್ಲೆಯಿಂದ ಪ್ರತಿ ಸಸಿಗೆ ರೂ. 45/- ರಂತೆ ಹಣ ಪಾವತಿಸಿ ಡೋರ್ ಡೆಲವರಿ ಪಡೆದುಕೊಂಡು ಸಸಿಗಳನ್ನು 5*5 ಮೀ. ಅಂತರದ ಅಧಿಕ ಸಾಂದ್ರ ಪದ್ಧತಿಯಲ್ಲಿ ನಾಟಿ ಮಾಡಿ ಸಸಿಗಳನ್ನು ಆರೈಕೆ ಮಾಡಿದ್ದಾರೆ. ಸಸಿಗಳಿಗೆ ಈಗ ಒಂದು ವರ್ಷ ಆಗಿದ್ದು, ಎರಡು ಬೀಡುಗಳಲ್ಲಿ ಒಟ್ಟಾರೆ 1200 ಕೆ.ಜಿ ಹಣ್ಣನ್ನು ಕಟಾವು ಮಾಡಿ ತಾವೇ ಸ್ವತಃ ಬೈಕ್‍ನಲ್ಲಿ ಸ್ಥಳೀಯ ಗ್ರಾಮಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಹಾಗೂ ಹೆಚ್ಚಿನ ಫಸಲು ಬಂದಾಗ ಚಿತ್ರದುರ್ಗ, ಚಳ್ಳಕೆರೆ ಮಾರುಕಟ್ಟೆಗೆ ಕೊಂಡೊಯ್ದು ಪ್ರತಿ ಕೆ.ಜಿ ಗೆ ರೂ.30 ರಿಂದ 50 ರ ವರೆಗೆ ದರಗಳನ್ನು ಪಡೆದಿರುತ್ತಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಇಳುವರಿಯ ನೀರಿಕ್ಷೆಯಲ್ಲಿದ್ದಾರೆ ರೈತ ಮಹಿಳೆ ತಿಪ್ಪೀರಮ್ಮ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9449151288ಕ್ಕೆ ರೈತರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…