ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

suddionenews
1 Min Read

ಮೈಸೂರು: ಜಿಲ್ಲೆಯ ಕೊಳ್ಳೆಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಅಪಘಾತ ಸಂಭವಿಸಿ, ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಮತ್ತು ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ, 10 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ‌. ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 2 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

“ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಈ ಸುದ್ದಿ ಕೇಳಿ ಸಂಕಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂಪಾಯಿ 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *