ಕರ್ನಾಟಕದಲ್ಲಿ 2 ಹಂತದ ಚುನಾವಣೆ : ಏಪ್ರಿಲ್ 26 ಹಾಗೂ ಮೇ 7 ರಂದು ಚುನಾವಣೆ

suddionenews
1 Min Read

ಇಂದು ಮುಖ್ಯ ಚುನಾವಣಾಧಿಕಾರಿ, ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, 543 ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಕರ್ನಾಟಕ ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಅಭ್ಯರ್ಥಿಗಳ ಕ್ರಿಮಿನಲ್ ಕೇಸ್ ಗಳ ಮಾಹಿತಿ ಕಡ್ಡಾಯವಾಗಿರಬೇಕು. ಅಕ್ರಮ ಹಣ ಸಾಗಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ಹಿಂಸಾಚಾರ ನಡೆಸಿದ್ರೆ ಕ್ರಮ ಕೈಗೊಳ್ಳುತ್ತೇವೆ. ಪಕ್ಷ ನೀತಿ ಸಂಹಿತೆಯನ್ನು ಪಾಲಿಸಬೇಕು. ಮತದಾರರಿಗೆ ದುಡ್ಡು ಹಂಚಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅಭ್ಯರ್ಥಿಗಳು ಮತದಾರರನ್ನು ಹಾಗಿಲ್ಲ. ಯಾವುದೇ ದ್ವೇಷದ ಭಾಷಣ ಮಾಡುವ ಹಾಗಿಲ್ಲ. ಆನ್ಲೈನ್ ಹಣದ ವಹಿವಾಟಿನ ಮೇಲೆ ಕಣ್ಣಿಡಲಾಗಿರುತ್ತದೆ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ಈ ಮೂಲಕ ಚುನಾವಣಾ ಪ್ರಚಾರದ ವೇಳೆ ಹಲವು ಷರತ್ತುಗಳು ಇರಲಿರುತ್ತವೆ.

ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಕರ್ನಾಟಕ ಲೋಕಸಭಾ ಚುನಾವಣೆ. ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡನೇ ಹಂತ 26 ಏಪ್ರಿಲ್, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 35 ಹಾಗೂ ಏಳನೇ ಹಂತ ಜೂನ್ 1ರಂದು ನಡೆಯಲಿದೆ.

ಕರ್ನಾಟಕದ ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 26 ಉಪಚುನಾವಣೆಗಳ ದಿನಾಂಕ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 7ರಂದು ಎರಡನೇ ಹಂತದ ಚುನಾವಣೆ. ಜೂನ್ 4ರಂದು ಫಲಿತಾಂಶ ಸಿಗಲಿದೆ.

Share This Article
Leave a Comment

Leave a Reply

Your email address will not be published. Required fields are marked *