Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

2018 ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ.. ಈಗ ಅವರ ಆಪ್ತನ ಮನೆ ಮೇಲೆ ಐಟಿ ದಾಳಿ..!

---Advertisement---

 

ಧಾರವಾಡ: ಬಿಜೆಪಿ ನಾಯಕ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಸದ್ಯ ಧಾರವಾಡದ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಸದ್ಯ ವಿನಯ್ ಕುಲಕರ್ಣಿ ಅವರ ಆಪ್ತನ ಮನೆ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ಸದ್ಯ ಚುನಾವಣಾ ಪ್ರಚಾರದಲ್ಲಿದ್ದಾರೆ. ಇದರ ನಡುವೆ ಮನೆ ಮೇಲೆ ದಾಳಿಯಾಗಿದೆ. ಸಪ್ತಾಪುರ ಋಷಿ ಪಾರ್ಕ್ ಬಳಿ ಇರುವ ನಿವಾಸದ ಮೇಲೆ ದಾಳಿಯಾಗಿದೆ. ಕೆಲವು ದಾಖಲಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಪ್ರಚಾರಕ್ಕೆ ಹೋಗಿರುವ ಕೇಕೆರೆ ಬರುವಿಕೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಐಟಿ ಅಧಿಕಾರಿಗಳು ಸರಿಯಾಗಿ ಕಳೆದ ಐದು ವರ್ಷದ ಹಿಂದೆ ಅಂದ್ರೆ 2018ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಮನೆ ಮೇಲೆ ದಾಳಿ ನಡೆಸಿದ್ದರು. ಇದೀಗ ಈ ವರ್ಷದ ಚುನಾವಣೆಯಲ್ಲಿ ಆಪ್ತನ ಮನೆ ಮೇಲೆ ದಾಳಿಯಾಗಿದೆ. ಇನ್ನು ಕೆಲ ದಿನಗಳ ಹಿಂದಷ್ಟೇ ವಿನಯ್ ಕುಲಕರ್ಣಿ ನನ್ನ ಆಪ್ತನ ಮೇಲೆ ದಾಳಿ ಮಾಡಲು ಪ್ಲ್ಯಾನ್ ಮಾಡಲಾಗಿದೆ ಎಂದಿದ್ದರು. ಈಗ ಅದೇ ನಿಜವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment