Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

2025ರ T20 ತಂಡ ಪ್ರಕಟಿಸಿದ ಐಸಿಸಿ : ನಾಯಕ ಯಾರೂ ಗೊತ್ತಾ..?

---Advertisement---

 

2025 ವರ್ಷದ ಪುರುಷರ ಟಿ20 ತಂಡವನ್ನು ಐಸಿಸಿ ಪ್ರಕಟಿಸಿದ್ದು, ನಾಯಕನನ್ನು ಆಯ್ಕೆ ಮಾಡಿದೆ. ರೋಹಿತ್ ಶರ್ಮಾ ಅವರನ್ನ 11 ಆಟಗಾರರ ತಂಡಕ್ಕೆ ನಾಯಕನನ್ನಾಗಿ ಆಯ್ಕೆ ಮಾಡಿದೆ. ಕಳೆದ ವರ್ಷ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಗೆದ್ದಿದ್ದರು. ಇದಷ್ಟೇ ಅಲ್ಲ ಭಾರತದ ಇನ್ನೂ ಮೂವರು ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆ ಮೂವರು ಆಟಗಾರರು ಯಾರು ಎಂದರೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ವೇಗದ ಬೌಲರ್ ಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಹರ್ಷದೀಪ್ ಸಿಂಗ್ ಅವರ ಹೆಸರುಗಳು ಸೇರಿವೆ. ಟಿ20ಯಲ್ಲಿ ಈ ನಾಲ್ವರು ಇರಲಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾದ ತಲಾ 1 ಆಟಗಾರನಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. 2024ರಲ್ಲಿನ ಪ್ರದರ್ಶನದ ಆಧಾರದ ಮೇಲೆ ಐಸಿಸಿ ಆಟಗಾರರನ್ನು ಆಯ್ಕೆ ಮಾಡಿದೆ.

ರೋಹಿತ್ 2024 ರಲ್ಲಿ 11 ಪಂದ್ಯಗಳಲ್ಲಿ 42 ರ ಸರಾಸರಿ ಮತ್ತು 160 ಸ್ಟ್ರೈಕ್ ರೇಟ್‌ನಲ್ಲಿ 378 ರನ್ ಗಳಿಸಿದ್ದರು. ಹಾರ್ದಿಕ್ 17 ಪಂದ್ಯಗಳಲ್ಲಿ 352 ರನ್ ಮತ್ತು 16 ವಿಕೆಟ್‌ಗಳನ್ನು ಸಹ ಪಡೆದಿದ್ದರು. ಮತ್ತೊಂದೆಡೆ, ಜಸ್ಪ್ರೀತ್ ಬುಮ್ರಾ 8 ಪಂದ್ಯಗಳಲ್ಲಿ ಕೇವಲ 8.26 ಸರಾಸರಿಯಲ್ಲಿ 15 ವಿಕೆಟ್ ಮತ್ತು ಅರ್ಷದೀಪ್ ಸಿಂಗ್ 18 ಪಂದ್ಯಗಳಲ್ಲಿ 36 ವಿಕೆಟ್ ಉರುಳಿಸಿದ್ದರು. ಕಳೆದ ವರ್ಷ ಭಾರತ ತಂಡದ ಆಟಗಾರರಿಗೆ ಉತ್ತಮ ವರ್ಷವಾಗಿತ್ತು. ಟೀಂ ಇಂಡಿಯಾ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಇದರಲ್ಲಿ ಅನೇಕ ಆಟಗಾರರು ಪ್ರಮುಖ ಪಾತ್ರ ವಹಿಸಿದ್ದರು. ಅದಕ್ಕಾಗಿಯೇ ರೋಹಿತ್ ನಾಯಕರಾಗಿರುವ ಐಸಿಸಿ ತಂಡದಲ್ಲಿ ಹೆಚ್ಚಿನ ಭಾರತೀಯರು ಕಾಣಿಸಿಕೊಂಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...