ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 214 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 16850 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 63295 RTPCR ಟೆಸ್ಟ್ ಸೇರಿದಂತೆ ಒಟ್ಟು 80145 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 214 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 118 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 286 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ 7 ಜನ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.