ಬೆಂಗಳೂರು.ಜೂನ್.18: ರಾಜ್ಯದ ಕಂದಾಯ ಇಲಾಖೆಯಲ್ಲಿ ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ಬಡ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ದೊರೆತಿದೆ. ಗ್ರೇಡ್-2 ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದ 232 ಅಧಿಕಾರಿಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ಬಡ್ತಿ ಪ್ರಕ್ರಿಯೆಯನ್ನು ಸರ್ಕಾರ ಆದ್ಯತೆಯ ಮೇರೆಗೆ ಪೂರ್ಣಗೊಳಿಸಿದ್ದು, ಇದರಿಂದ ಅರ್ಹ ಅಧಿಕಾರಿಗಳ ದೀರ್ಘಕಾಲದ ನಿರೀಕ್ಷೆ ಈಡೇರಿದಂತಾಗಿದೆ. ಈ ಕ್ರಮವು ಸರ್ಕಾರಿ ನೌಕರರ ಕಾರ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಸೇವಾ ಬದ್ಧತೆಯನ್ನು ಸರ್ಕಾರ ಗೌರವಿಸುತ್ತದೆ ಎಂಬ ಸಂದೇಶವನ್ನು ನೀಡಿದೆ.
ರಾಜ್ಯದ ನಾಗರಿಕರಿಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸೇವೆ ಒದಗಿಸುವ ಗುರಿಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಕಂದಾಯ ಇಲಾಖೆಯ ಕಾರ್ಯಕ್ಷಮತೆಯನ್ನು ಇನ್ನಷ್ಟು ಬಲಪಡಿಸುವ ಜೊತೆಗೆ ಸಾರ್ವಜನಿಕ ಸೇವೆಯ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಬಡ್ತಿ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಡ್ತಿ ಪಡೆದ ಅಧಿಕಾರಿಗಳು ಹೊಸ ಹುದ್ದೆಯ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ, ಜನರಿಗೆ ಇನ್ನಷ್ಟು ದಕ್ಷ, ಪ್ರಾಮಾಣಿಕ ಹಾಗೂ ಸ್ಪಂದನಶೀಲ ಸೇವೆ ಒದಗಿಸಬೇಕು ಎಂದು ಡಾ. ಪರಮೇಶ್ವರ್ ಕರೆ ನೀಡಿದ್ದಾರೆ. ಈ ಪ್ರಕ್ರಿಯೆ ಯಶಸ್ವಿಯಾಗಲು ಸಹಕರಿಸಿದ ಅಧಿಕಾರಿಗಳ ಶ್ರಮವನ್ನು ಕೂಡ ಅವರು ಪ್ರಶಂಸಿಸಿದ್ದಾರೆ.
ಸಕ್ರಿಯ ಮತ್ತು ಸಮರ್ಥ ಅಧಿಕಾರಿ ವರ್ಗ ಯಾವುದೇ ಸರ್ಕಾರದ ದೊಡ್ಡ ಶಕ್ತಿಯಾಗಿದ್ದು, ಸಮಾನ ಅವಕಾಶಗಳು ಹಾಗೂ ವೃತ್ತಿಪರ ಕೌಶಲ್ಯಗಳಿಗೆ ಉತ್ತೇಜನ ನೀಡುವ ಆಡಳಿತ ವ್ಯವಸ್ಥೆ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅಧಿಕಾರಿಗಳ ಸಬಲೀಕರಣದ ಮೂಲಕ ಜನಸ್ನೇಹಿ ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












