ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 239 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 13516 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 47195 RTPCR ಟೆಸ್ಟ್ ಸೇರಿದಂತೆ ಒಟ್ಟು 60711 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 239 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 139 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 376 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ 5 ಜನ ಕೊರೊನಾದಿಂದ ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.