ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 261 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 7750 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 45738 RTPCR ಟೆಸ್ಟ್ ಸೇರಿದಂತೆ ಒಟ್ಟು 53488 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 261 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 157 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 296 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ 5 ಜನ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.