ಕಳೆದ 24 ಗಂಟೆಯಲ್ಲಿ 278 ಹೊಸ ಕೇಸ್ : 3 ಜನ ಸಾವು..!

suddionenews
0 Min Read

ಬೆಂಗಳೂರು: ಆರೋಗ್ಯ ಇಲಾಖೆ ಕೊವಿಡ್ ವರದಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 278 ಜನರಿಗೆ ಹೊಸದಾಗಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 11102 ಜನಕ್ಕೆ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 41113 RTPCR ಟೆಸ್ಟ್ ಸೇರಿದಂತೆ ಒಟ್ಟು 52215 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅದರಲ್ಲಿ 278 ಜನರಿಗೆ ಕೊರೊನಾ ಕನ್ಫರ್ಮ್ ಆಗಿದೆ. 182 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 458 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದಾಗಿ 3 ಜನ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *