Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಯೋಜನೆಯ 29ನೇ ಕಂತು ಬಿಡುಗಡೆ, ಶೀಘ್ರವೇ  ಮಹಿಳೆಯರ ಖಾತೆಗೆ ಹಣ ಜಮಾ

---Advertisement---

 

ಚಿತ್ರದುರ್ಗ. ಮಾರ್ಚ್. 30: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಜಿಲ್ಲೆಯ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ  ಅನುಷ್ಠಾನ   ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.

 

ಚಿತ್ರದುರ್ಗ ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರ ಒಟ್ಟು ರೂ.77,66,82,000/- ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

 

ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/- ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ಮೂಲಕ ಈ ಯೋಜನೆ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಆರ್ಥಿಕ ಭದ್ರತೆಯ ಬೆಳಕು ತಂದಿದೆ.

 

ಈ ಯೋಜನೆಯ ಪ್ರಮುಖ ಉದ್ದೇಶ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು. ಮನೆ ನಡೆಸುವ ಹೊಣೆಗಾರಿಕೆಯನ್ನು ಹೊತ್ತಿರುವ ಮಹಿಳೆಯರಿಗೆ ಸರ್ಕಾರದಿಂದ ನೇರ ಸಹಾಯ ದೊರಕುವುದರಿಂದ ಅವರ ಆತ್ಮವಿಶ್ವಾಸವೂ ಹೆಚ್ಚಾಗಿದೆ. ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನೇಕ ಮಹಿಳೆಯರು ಈ ಹಣವನ್ನು ಮನೆಯ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಸಣ್ಣ ಉಳಿತಾಯಕ್ಕೆ ಬಳಸುತ್ತಿದ್ದಾರೆ.

 

ಗೃಹಲಕ್ಷ್ಮಿ ಯೋಜನೆ ಆರಂಭವಾದ ನಂತರ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಹಲವು ಕುಟುಂಬಗಳಲ್ಲಿ ಮಹಿಳೆಯರ ಮಾತಿಗೆ ಹೆಚ್ಚಿನ ಗೌರವ ದೊರಕುತ್ತಿದೆ. ಆರ್ಥಿಕ ಸಹಾಯದಿಂದ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುವ ಅವಕಾಶ ಪಡೆದಿದ್ದಾರೆ.

 

ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆ ಕೇವಲ ಹಣಕಾಸಿನ ಸಹಾಯವಲ್ಲ, ಮಹಿಳೆಯರ ಗೌರವ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುವ ಸಾಮಾಜಿಕ ಕ್ರಾಂತಿಯಾಗಿದೆ. ಒಟ್ಟಿನಲ್ಲಿ, ಗೃಹಲಕ್ಷ್ಮಿ ಯೋಜನೆ ಕರ್ನಾಟಕದ ಮಹಿಳೆಯರಿಗೆ ಆಶಾಕಿರಣವಾಗಿದ್ದು, ಕುಟುಂಬಗಳ ಆರ್ಥಿಕ ಸ್ಥಿರತೆ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಈ ಯೋಜನೆ ಇನ್ನಷ್ಟು ಮಹಿಳೆಯರ ಬದುಕನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುವುದು ಖಚಿತ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ  ಅನುಷ್ಠಾನ   ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...