Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಪೀಠಾರೋಹಣದ 2 ವಾರ್ಷಿಕೋತ್ಸವ : ಚಿತ್ರದುರ್ಗದಲ್ಲಿ ಭಕ್ತಿ ಸಿಂಚನ ಶೋಭಾಯಾತ್ರೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.15) : ಆರ್ಯವೈಶ್ಯ ಸಂಘ, ಆರ್ಯವೈಶ್ಯ ಸಹ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನಂ, ವಾಸವಿ ಪೀಠಂ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರ ಪೀಠಾರೋಹಣದ 2 ನೇ ವಾರ್ಷಿಕೋತ್ಸವ ಅಂಗವಾಗಿ ಭಕ್ತಿ ಸಿಂಚನ ಶೋಭಾಯಾತ್ರೆ ಶನಿವಾರ ನಗರದಲ್ಲಿ ನಡೆಯಿತು.

ಚಳ್ಳಕೆರೆ ಟೋಲ್‍ಗೇಟ್ ಸಮೀಪ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಕುಮಾರ್ ಬೈಕ್‍ರ್ಯಾಲಿ ಉದ್ಗಾಟಿಸಿದರು.

ಕನ್ನಿಕಾ ಪರಮೇಶ್ವರಿ ಉತ್ಸವ ಮೂರ್ತಿ ಹಾಗೂ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳನ್ನು ನಾದಸ್ವರ ಹಾಗೂ ಚಂಡೆ ವಾದ್ಯಗಳೊಂದಿಗೆ ರಾಜಬೀದಿಗಳಲ್ಲಿ ವೈಭವದ ಶೋಭಾಯಾತ್ರೆ ಕರೆದೊಯ್ಯಲಾಯಿತು.

ಮದಕರಿವೃತ್ತದ ಮೂಲಕ ಸಾಗಿದ ಶೋಭಾಯಾತ್ರೆಯನ್ನು ವಾಸವಿ ಸರ್ಕಲ್‍ನಲ್ಲಿ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು.

ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಗೋಪೂಜೆ, ವೇದಘೋಷ, ವಿವಿಧ ಹೋಮಗಳು ನಡೆಯಿತು. ವಿವಿಧ ಭಜನಾ ಮಂಡಳಿಯಿಂದ ಭಜನೆಯಿತ್ತು.

ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷ ಲಿಂಗಂ ಶ್ರೀನಿವಾಸ್, ಕೃಷ್ಣ, ಭಕ್ತಿಸಿಂಚನ ಕಾರ್ಯಕ್ರಮದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥಶೆಟ್ಟಿ, ಕಾರ್ಯದರ್ಶಿ ಟಿ.ಭದ್ರಿನಾಥ್, ಪುಟ್ಟರಾಜು, ಕಾಂತರಾಜು, ಮಂಜುಪ್ರಸಾದ್, ಅವಿನಾಶ್, ಯಶಸ್  ಇನ್ನು ಅನೇಕರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...