ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ್ದು. ದ್ವಿತೀಯ ಪಿಯುಸಿ ಮುಗಿಸಿ ಮುಂದಿನ ಶಿಕ್ಷಣದ ಬಗ್ಗೆ ಗಮನ ಕೊಡುತ್ತಾರೆ. ಈ ಹಂತ ವಿದ್ಯಾರ್ಥಿಗಳಿಗೆ ಬಹಳ ಮುಖ್ಯ. ಇದೀಗ ಪರೀಕ್ಷೆಯ ಫಲಿತಾಂಶ ಇಂದೇ(ಏ.21) ಸಿಗಲಿದೆ. ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಂಡಳಿಯ ಅಧಿಕೃತ ವೆಬ್ಸೈಟ್ ಆದಂತ, www.karresults.nic.in ನಲ್ಲಿ ಫಲಿತಾಂಶವನ್ನು ನೋಡಬಹುದು.
ಪ್ರತಿ ಬಾರಿ ಅನುಸರಿಸಿದಂತೆ ಮಂಡಳಿಯೂ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುತ್ತಾರೆ. ಯಾವ ಕಾಲೇಜು ಮೊದಲ ಸ್ಥಾನ, ಯಾವ ವಿದ್ಯಾರ್ಥಿಗಳಿಗೆ ರ್ಯಾಂಕ್ ಬಂದಿದೆ. ಈ ಎಲ್ಲಾ ಮಾಹಿತಿಯನ್ನು ನೀಡಿದ ಮೇಲೆ ಫಲಿತಾಂಶವನ್ನು ವೆಬ್ಸೈಟ್ ನಲ್ಲಿ ಪ್ರಕಟ ಮಾಡಲಿದೆ. ಕಾಲೇಜುಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ.