Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದ ಪಾಳುಬಿದ್ದ ಮನೆಯೊಂದರಲ್ಲಿ 3 ಅಸ್ಥಿಪಂಜರ ಪತ್ತೆ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.28 : ಪಾಳುಬಿದ್ದ ಮನೆಯೊಂದರಲ್ಲಿ ಮೂವರು ವ್ಯಕ್ತಿಗಳ ಮೃತದೇಹದ ಅಸ್ಥಿಪಂಜರ ಪತ್ತೆಯಾದ ಆತಂಕಕಾರಿ ಘಟನೆ ನಗರದ ಚಳ್ಳಕೆರೆ ಗೇಟ್ ಬಳಿ ಇರುವ ಜೈಲ್ ರಸ್ತೆಯಲ್ಲಿ ನಡೆದಿದೆ.

ಜೈಲ್ ರಸ್ತೆಯಲ್ಲಿರುವ ಜಗನ್ನಾಥ ರೆಡ್ಡಿ, ಇಂಜಿನಿಯರ್, ದೊಡ್ಡ ಸಿದ್ದವ್ವನಹಳ್ಳಿ ಎಂಬ ಹೆಸರರಿರುವ ಮನೆಯಲ್ಲಿ ಮೂರು  ಅಸ್ಥಿಪಂಜರಗಳು ಕಂಡುಬಂದಿವೆ.

ದುರ್ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಬಡಾವಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಮನೆಯಲ್ಲಿ ಕಳೆದ ನವೆಂಬರ್ 2022 ರಿಂದ ಯಾರೂ ಇರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್,  ಸಿಪಿಐ ನಹಿಂ ಅಹಮದ್, ಪಿಎಸ್ಐ ರಘು ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಘಟನೆ ಕುರಿತು ಸ್ಥಳೀಯರ ಶಂಕೆ : 2019ರಲ್ಲಿ  ದೊಡ್ಡ ಸಿದ್ದವ್ವನಹಳ್ಳಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರ ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು ಹಣ ಮಾಡಿದರೂ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಇದರಿಂದ ತೀವ್ರ ಮನನೊಂದು ಅವರು ಯಾರ ಸಂಪರ್ಕಕ್ಕೂ ಸಿಗದೆ ಮನೆಯಲ್ಲಿಯೇ ಅವರು ಇರುತ್ತಿದ್ದರು. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಕಿಟಕಿಯಲ್ಲಿ ಮಾತಾಡಿಸಿ ಕಳುಹಿಸಿತಿದ್ದರು ಎನ್ನಲಾಗಿದೆ. ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು,  ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿವೆ. ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ ಅಸ್ಥಿಪಂಜರಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮನೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment