Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ನೀರು: ಸರ್ಕಾರದ ಆದೇಶಕ್ಕೆ ನೀರಾವರಿ ಹೋರಾಟ ಸಮಿತಿ ಸ್ವಾಗತ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ಚಿತ್ರದುರ್ಗ ಶಾಖಾ ಕಾಲುವೆ ಪರೀಕ್ಷಾರ್ಥ ಭದ್ರಾ ಜಲಾಶಯದಿಂದ ಮೂರು ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸ್ವಾಗತಿಸಿದೆ.

ಈ ಸಂಬಂಧ ಹೇಳಿಕೆ ನೀಡಿರುವ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಜನವರಿಯಲ್ಲಿಯೇ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ನೀರು ಹರಿಸಿ ಗೋನೂರು ಕೆರೆಯವರೆಗೆ ತರಲಾಗುವುದೆಂದು ಹೇಳಲಾಗಿತ್ತು. ಇದೀಗ ತಡವಾಗಿ ನೀರು ಹರಿಯುತ್ತಿರುವುದು ಜಿಲ್ಲೆಯ ರೈತಾಪಿ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ. ಹೊಳಲ್ಕೆರೆ ತಾಲೂಕಿನ ಬಹುತೇಕ ಕೆರೆಗಳಿಗೆ ಪರೀಕ್ಷಾರ್ಥ ಹರಿಯುವಿಕೆಯಲ್ಲಿ ನೀರಿನ ಸ್ಪರ್ಶವಾಗಲಿದೆ.

ಕಾಮಗಾರಿ ಮುಗಿದಿರುವುದರಿಂದ ಪರೀಕ್ಷಾರ್ಥವಾಗಿ ಮಾತ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಗೋನೂರು ಕೆರೆಯವರೆಗೆ ನೀರು ಹರಿದಾಕ್ಷಣ ಭದ್ರಾ ಮೇಲ್ದಂಡೆ ಕಾಮಗಾರಿ ಮುಗಿದಂತಾಗುವುದಿಲ್ಲ. ತುಮಕೂರು ಶಾಖಾ ಕಾಲುವೆ ಕೆಲಸ ಬಾಕಿ ಇದೆ. ಅಲ್ಲದೇ ಚಳ್ಳಕೆರೆ, ಮೊಳಕಾಲ್ಮೂರು, ಜಗಳೂರು, ಪಾವಗಡ ಭಾಗಗಳಿಗೂ ನೀರು ತಲಪಬೇಕಾಗಿದ್ದು ಉಳಿದ ಕಾಮಗಾರಿ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಹಾಗೂ ತುಂಗಾದಿಂದ ಭದ್ರಾ ಜಲಾಶಯದವರೆಗಿನ ಕಾಮಗಾರಿಗೆ ಚುರುಕಿನ ವೇಗ ನೀಡಿ ಮುಂದಿನ ಮಳೆಗಾಲದ ಒಳಗಾದರೂ ನೀರು ಲಿಫ್ಟ್ ಮಾಡುವ ವಾತಾವರಣವ ಸರ್ಕಾರ ಸೃಷ್ಡಿಸಬೇಕು.
ಚಿತ್ರದುರ್ಗ ಶಾಖಾ ಕಾಲುವೆ ಪರೀಕ್ಷಾರ್ಥ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಪಟ್ಟು ಆದೇಶ ಹೊರಡಿಸಿದ ಸಚಿವ ಟಿ.ರಘುಮೂರ್ತಿ ಅವರ ಕಾರ್ಯಕ್ಕೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಲಿಂಗಾರೆಡ್ಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now