ತುಮಕೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದೆ. ಆದರೆ ಸಿಎಂ ಬದಲಾವಣೆಯ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ಇಂಥ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮಶಕ್ತಿ ಪ್ರದರ್ಶನ ಮಾಡುವಂತ ಕೆಲಸವನ್ನ ಮಾಡ್ತಾ ಇರ್ತಾರೆ. ತನ್ನ ಜೊತೆಗಿರುವ ಜನ, ಕ್ರೇಜ್ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿಕೊಡ್ತಾರೆ. ಇದೀಗ ತುಮಕೂರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಈ ಮೂಲಕ ಮೇ 20ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಬೃಹತ್ ಸಮಾವೇಶಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಸಚಿವ ಜಿ ಪರಮೇಶ್ವರ್ ಅವರು ತೆಗೆದುಕೊಂಡಿದ್ದಾರೆ. ಆದರೆ ಇದಾದ ಮೇಲೆ ಸಾಕಷ್ಟು ಚರ್ಚೆ ಕಾಂಗ್ರೆಸ್ ನಲ್ಲಿಯೇ ನಡೆಯುತ್ತಿದೆ. ಇದರ ಲೆಕ್ಕಚಾರವೇನು ಎಂಬ ಚರ್ಚೆಗಳು ಶುರುವಾಗಿದೆ.
ಇನ್ನು ಪಂಚರಾಜ್ಯ ಚುನಾವಣೆಯ ಬಳಿಕ ಸಿಎಂ ಗಾದಿಗೆ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಅವರನ್ನು ಕರೆಸಿ, ಚರ್ಚೆ ನಡೆಸಿ, ತೀರ್ಮಾನ ಮಾಡು ಅಂತ ಪಟ್ಟು ಹಿಡಿದಿದ್ದಾರೆ. ಖುದ್ದು ಮತ್ತೆ ದೆಹಲಿ ಯಾತ್ರೆಗೆ ಡಿಕೆ ಶಿವಕುಮಾರ್ ಹೊರಡಲಿದ್ದಾರೆ. ಈಗಾಗಲೇ ಸಾಕಷ್ಟು ಸಲ ಹೋಗಿ ಬಂದಿರುವ ಡಿಕೆ ಶಿವಕುಮಾರ್, ಮುಂದಿನ ವಾರ ಮತ್ತೆ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಬೆನ್ನಲ್ಲೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನು ಒಟ್ಟುಗೂಡಿಸಿ, ಶಕ್ತಿ ಪ್ರದರ್ಶನಕ್ಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಸಲಿದ್ದಾರೆ. ಲಕ್ಷಾಂತರ ಜನರ ಸೇರಿಸಿ ಸಮಾವೇಶ ಮಾಡಲು ಸಿಎಂ ಆಪ್ತರು ಪ್ಲ್ಯಾನ್ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











