ಪೇಶಾವರ : ಪಾಕಿಸ್ತಾನದ ಪೇಶಾವರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಶುಕ್ರವಾರದಂದು ಪ್ರಾರ್ಥನೆ ಮಾಡುತ್ತಿದ್ದ ವೇಳೆಯಲ್ಲಿ ಕಿಸ್ಸಾ ಖ್ವಾನಿ ಬಜಾರ್ನಲ್ಲಿರುವ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬರ್ ಮಸೀದಿಗೆ ನುಗ್ಗಿದ ಬಂದೂಕುಧಾರಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.
ಘಟನೆಯಲ್ಲಿ ಇದುವರೆಗೆ 30 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 50 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇವರಲ್ಲಿ ಇನ್ನೂ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.