ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 301 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 9705 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 78682 RTPCR ಟೆಸ್ಟ್ ಸೇರಿದಂತೆ ಒಟ್ಟು 88387 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 301 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 162 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 359 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 7 ಮಂದಿ ಸಾವನ್ನಪ್ಪಿದ್ದಾರೆ.