ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಮಾ. 21 : ನಗರದ ಆನೆ ಬಾಗಿಲ ಬಳಿಯಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ (ರಿ) ವತಿಯಿಂದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 30ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಳಸಾಭಿಷೇಕ ಮಾ. 21 ರಿಂದ 23ರವರೆಗೆ ನಡೆಯಲಿದೆ ಎಂದು ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ತಿಳಿಸಿದೆ.
ಮಾ.21ನೇ ಶುಕ್ರವಾರ ಸಂಜೆ ರಾಕ್ಷೋಘ್ನ ಹೋಮ, ವಾಸ್ತು ಹೋಮ, ದುರ್ಗಾ ದೀಪ ನಮಸ್ಕಾರ ಪೂಜೆ ನಡೆಸಲಾಯಿತು. ಮಾ.22 ರ ಶನಿವಾರ ಬೆಳಿಗ್ಗೆ ನವಗ್ರಹ ಶಾಂತಿ, ಗಂಗಾ ಶಾಂತಿ, ನಾಗಶಾಂತಿ ಸಂಜೆ 5.30ಕ್ಕೆ ಅಧಿವಾಸದ ಹೋಮ, ಬ್ರಹ್ಮಕಲಶ ಸ್ಥಾಪನೆ, ಅಷ್ಟಾವಧಾನ ಸೇವೆ, ನಂತರ ಕಳಸ ಸ್ಥಾಪನೆ ಮಾಡಲಾಗುವುದು. ಕಳಸಕ್ಕೆ ಹಣ ಕೊಟ್ಟವರ ಹೆಸರು ಗೋತ್ರ, ನಕ್ಷತ್ರದ ಮೂಲಕ ಸಂಕಲ್ಪ ಮಾಡಿಸಲಾಗುವುದು ಪುರೋಹಿತರು ಕಳಸವನ್ನು ಮುಟ್ಟಿಸಿ ಮೂಲ ದೇವರಿಗೆ ಅಭಿಷೇಕ ಮಾಡಿ ನಂತರ ಕಳಸವನ್ನು ದಂಪತಿಗಳಿಗೆ ನೀಡಲಾಗುವುದು.
ಮಾ. 23 ನೇ ಭಾನುವಾರ ಕಲಾವೃದ್ಧಿ ಹೋಮ, ಶಾಂತಿ ಪ್ರಾಯಶ್ಚಿತ್ತ, ಹೋಮಾದಿಗಳು ಬ್ರಹ್ಮ ಕಲಶಾಭಿಷೇಕ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಧ್ಯಾಹ್ನ 1.00 ರಿಂದ ಪೂಜಾ ಸೇವಾಕರ್ತರು ಹಾಗೂ ಸಮಸ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಪೂಜಾ ಕಾರ್ಯಕ್ರಮ ನಡೆಸಲಾಗುವುದು.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಆಗಮಿಸುವುದರ ಮೂಲಕ ವಿನಾಯಕನ ಕೃಪೆಗೆ ಪಾತ್ರರಾಗುವಂತೆ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯವರು ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












