ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ (ಫೆ. 08): ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಮತ್ತು ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇದೇ ಫೆಬ್ರವರಿ 10 ರಂದು ಸಂಜೆ 6ಕ್ಕೆ ಚಿತ್ರದುರ್ಗ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ 30ನೇ ಫಲ-ಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕಣರ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹಾಗೂ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಘನ ಉಪಸ್ಥಿತಿವಹಿಸುವವರು.
ಕೃಷಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು.
ವಿಶೇಷ ಅಹ್ವಾನಿತರಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ ನಾರಾಯಣಸ್ವಾಮಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷ ಎಂ. ಚಂದ್ರಪ್ಪ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್, ಶಾಸಕರಾದ ಟಿ. ರಘುಮೂರ್ತಿ, ಪೂರ್ಣಿಮಾ ಕೆ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್. ನವೀನ್ ಭಾಗವಹಿಸುವರು. ವಿಶೇಷ ಅತಿಥಿಗಳಾಗಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಲಾಲ್‍ಬಾಗ್ ತೋಟಗಾರಿಕೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ರಾಮ್ ಪ್ರಸಾತ್ ಮನೋಹರ್, ಜಿಲ್ಲಾಧಿಕಾರಿ ಜಿ.ಆರ್.ಜೆ ದಿವ್ಯಪ್ರಭು, ಜಿ.ಪಂ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಎಂ.ಎಸ್ ದಿವಾಕರ್, ಜಿಲ್ಲಾ ರಕ್ಷಣಾಧಿಕಾರಿ ಕೆ. ಪರಶುರಾಮ, ತೋಟಗಾರಿಕೆ ಅಪರ ನಿರ್ದೇಶಕ ಹೆಚ್.ಎಸ್. ಶಿವಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕ ಕೆ.ಎಂ. ಪರಶಿವಮೂರ್ತಿ, ಅಪರ ನಿರ್ದೇಶಕರಾದ ಪಿ.ಎಂ. ಸೊಬರದ, ಕೆ.ಬಿ. ದುಂಡಿ, ನಗರಸಭೆ ಆಯುಕ್ತ ಜಿ.ಹೆಚ್. ಕಾಂತರಾಜ್ ಭಾಗವಹಿಸುವರು.
ಫೆಬ್ರವರಿ 12ರಂದು ಸಮಾರೋಪ ಸಮಾರಂಭ: ಫೆ.12ರಂದು ಸಂಜೆ 6ಕ್ಕೆ ತೋಟಗಾರಿಕೆ ಇಲಾಖೆ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕಣರ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹಾಗೂ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಘನ ಉಪಸ್ಥಿತಿವಹಿಸುವವರು.
ಕೃಷಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಬಹುಮಾನ ವಿತರಣೆ ಮಾಡುವರು. ತೋಟಗಾರಿಕೆ ಮತ್ತು ಯೋಜನೆ ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಮುನಿರತ್ನ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವವರು.
ವಿಶೇಷ ಅಹ್ವಾನಿತರಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ. ವೈ.ಎ ನಾರಾಯಣಸ್ವಾಮಿ, ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷ ಎಂ. ಚಂದ್ರಪ್ಪ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್, ಶಾಸಕರಾದ ಟಿ. ರಘುಮೂರ್ತಿ, ಪೂರ್ಣಿಮಾ ಕೆ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ. ಸುರೇಶ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ತೋಟಗಾರಿಕೆ ಜಂಟಿ ನಿರ್ದೇಶಕ ಎಂ. ವಿಶ್ವನಾಥ, ಜಂಟಿ ಕೃಷಿ ನಿರ್ದೇಶಕ ರಮೇಶ್‍ಕುಮಾರ್, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಜಿ.ಡಿ. ಕೆಂಚವೀರಪ್ಪ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.