ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಗೆ ಪತ್ರ ಬರೆದ 31 ಕಾಂಗ್ರೆಸ್ ಶಾಸಕರು

1 Min Read

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎರಡು ವಿಚಾರಗಳು ಚರ್ಚೆಯಲ್ಲಿವೆ. ಒಂದು ಸಿಎಂ ಸ್ಥಾನದ ಬದಲಾವಣೆ, ಮತ್ತೊಂದು ಸಚಿವ ಸಂಪುಟ ಪುನರ್ ರಚನೆ. ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಕಾಯ್ತಾ ಇದ್ರೆ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಕಾಯ್ತಾ ಇದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಹೊಸದಾಗಿ ಆಯ್ಕೆಯಾದಂತ 31 ಶಾಸಕರೇ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ.

ಸಂಪುಟ ಪುನರ್ ರಚನೆ ವೇಳೆ 31 ಮಂದಿ ಮೊದಲ ಬಾರಿಗೆ ಶಾಸಕರಾದವರ ಪೈಕಿ 5 ಮಂದಿಗರ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಮೊದಲ ಬಾರಿಗೆ ಗೆದ್ದ ಶಾಸಕರೆಲ್ಲಾ ಈ ಪತ್ರಕ್ಕೆ ಸಹಿ ಹಾಕಿ ಹೈಕಮಾಂಡ್ ನಾಯಕರಿಗೆ ರವಾನೆ ಮಾಡಿದ್ದಾರೆ. ಹೀಗೆ ಪತ್ರ ಬರೆದಿರುವುದನ್ನು ಸಹಿ ಹಾಕಿರುವ ಶಾಸಕರು ಕೂಡ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.

 

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಈ ಪತ್ರ ರವಾನಿಸಿದ್ದಾರೆ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು ಮುಖ್ಯಮಂತ್ರಿಗಳಾಗಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿರುವ 38 ಮಂದಿ ಶಾಸಕರ ಪೈಕಿ ಕನಿಷ್ಠ 5 ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ನಾಯಕರಿಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಪತ್ರ ಹೋಗಿರುವುದು ಸತ್ಯ ಎಂದು ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕೂಡ ಹೇಳಿದ್ದಾರೆ.

Share This Article
Enable Notifications OK No thanks