ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 321 ಜನಕ್ಕೆ ಕೊರೊನಾ ಸೋಂಕು ತಗುಲಿದೆ.
ಅದರಲ್ಲಿ 19027 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 78870 RTPCR ಟೆಸ್ಟ್ ಸೇರಿದಂತೆ ಒಟ್ಟು 97897 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 321 ಜನಕ್ಕೆ ಸೋಂಕು ದೃಢಪಟ್ಟಿದೆ. 211 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 253 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 4 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.