ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 349 ಜನಕ್ಕೆ ಹೊಸದಾಗಿ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 28358 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 56664 RTPCR ಟೆಸ್ಟ್ ಸೇರಿದಂತೆ ಒಟ್ಟು 85022 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 349 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದೆ.
ಅದರಲ್ಲಿ 161 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಉಳಿದಂತೆ 399 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 14 ಜನ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ.