Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ವರ್ಷದ ಆರಾಧನಾ ಮಹೋತ್ಸವ : ಭಕ್ತರ ಹರ್ಷೋದ್ಘಾರದ ನಡುವೆ ರಥೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ. 12 : ನಗರದ ಆನೇ ಬಾಗಿಲ ಬಳಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಸಮಿತಿವತಿಯಿಂದ 354ನೇ ವರ್ಷದ ಆರಾಧನಾ ಪಂಚರಾತ್ರೋತ್ಸವವನ್ನು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ಅ. 10 ರಿಂದ 12ರವರೆಗೆ ನಡೆಸಲಾಯಿತು.

ಈ ಮೂರು ದಿನದಲ್ಲಿ  ಗುರುಸಾರ್ವಭೌಮರ ಪೂರ್ವಾರಾಧನೆ ಮಧ್ಯಾರಾಧನೆ ಹಾಗೂ ಉತ್ತರಾರಾಧನೆ ರಾಯರ ಆರಾಧನಾ ನಡೆಯಿತು. ಈ ದಿನಗಳಲ್ಲಿ ಪ್ರತಿದಿನ ಸುಪ್ರಭಾತ, ನಿರ್ಮಾಲ್ಯ, ಕ್ಷೀರಾಅಭಿಷೇಕ, ಫಲ ಪಂಚಾಮೃತ, ಅಭಿಷೇಕ ಪಾದಪೂಜೆ ಕನಕಾಭಿಷೇಕ, ಮಹಾಪೂಜೆ, ಸರ್ವ ಸೇವಾ ಅಲಂಕಾರ ಸೇವೆ, ಮಹಾ ನೈವೇದ್ಯ, ಮಹಾಮಂಗಳರತಿ, ಪ್ರಸಾದ ವಿನಿಯೋಗ ನಡೆಸಲಾಯಿತು. ಆ. 12 ರ ಇಂದು ಉತ್ತರಾರಾಧನೆ ಪ್ರಯುಕ್ತ ನಗರದ ರಾಜ ಬೀದಿಗಳಲ್ಲಿ ವೇದ ಘೋಷದೊಡನೆ ಪಲ್ಲಕ್ಕಿ ಉತ್ಸವ ಹಾಗೂ ಮಠದಲ್ಲಿ ರಥೋತ್ಸವ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿದ್ವಾನ್ ಶ್ರೀ ರಾಘವಾಚಾರ್ಯ ಮಿಟ್ಟಿಯ ವರಿಂದ ಶ್ರೀ ರಾಘವೇಂದ್ರ ವಿಜಯ ಪ್ರವಚನ, ಸುಜೀತ್ ಕುಲಕರ್ಣಿ, ರಜತ್ ಕುಲಕರ್ಣಿ, ಕಿತ್ತೂರು ದಾಸವಾಣಿ, ಶ್ರೀ ಅಂಜನಾ ನೃತ್ಯ ಕಲಾ ಕೇಂದ್ರ, ವಿದೂಷಿ ಶ್ರೀಮತಿ ನಂದಿನಿ ಶಿವಪ್ರಕಾಶ್ ಹಾಗೂ ಶಿಷ್ಯವೃಂದ ರವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ಆ13ನೇ ಬುಧವಾರ ಶ್ರೀ ಸುಜ್ಞಾನೇಂದ್ರತೀರ್ಥರ ಆರಾಧನೆ, ಪವಮಾನ ಹೋಮ, ಸರ್ವ ಸಮರ್ಪಣೋತ್ಸವ ನ್ಯೂ ಆರಾಧನಾ ನಡೆಯಲಿದ್ದು,ಸಂಜೆ 6.ರಿಂದ8.ರವರೆಗೆ ಶ್ರೀಮತಿ ಸಿಂಧೂರ ಮತ್ತು ಸಹೋದರಿಯವರಿಂದ ಭರತನಾಟ್ಯ ಮತ್ತು ಕೂಚಿಪುಡಿ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment