ಬೆಂಗಳೂರು: ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ ಕೊರೊನಾ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ 366 ಜನಕ್ಕೆ ಹೊಸದಾಗಿ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 11308 ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್, 41167 RTPCR ಟೆಸ್ಟ್ ಸೇರಿದಂತೆ ಒಟ್ಟು 52475 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 366 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 224 ಮಂದಿ ಪತ್ತೆಯಾಗಿದ್ದಾರೆ.
ಇನ್ನು ಕೊರೋನಾದಿಂದ ಒಟ್ಟು 801 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 17 ಜನ ಸಾವನ್ನಪ್ಪಿದ್ದಾರೆ.