ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 371 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 23024 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 97049 RTPCR ಟೆಸ್ಟ್ ಸೇರಿದಂತೆ ಒಟ್ಟು 120073 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 371 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 193 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದಾಗಿ 7 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ ಕೊರೊನಾ ಜಯಿಸಿ, 342 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.