ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 373 ಜನಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 13063 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 69790 RTPCR ಟೆಸ್ಟ್ ಸೇರಿದಂತೆ ಒಟ್ಟು 82853 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 373 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 146 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 10 ಜನ ಕೊರೊನಾದಿಂದಾಗಿ ಮೃತಪಟ್ಟಿದ್ರೆ 611 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.